alex Certify ಚಾರ್ಜಿಂಗ್ ವೇಳೆಯಲ್ಲೇ ಸ್ಕೂಟರ್ ಸ್ಪೋಟ: ಮನೆಗೆ ಬೆಂಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾರ್ಜಿಂಗ್ ವೇಳೆಯಲ್ಲೇ ಸ್ಕೂಟರ್ ಸ್ಪೋಟ: ಮನೆಗೆ ಬೆಂಕಿ

ಮಂಡ್ಯ: ಚಾರ್ಜಿಂಗ್ ವೇಳೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಸ್ಪೋಟಗೊಂಡು ಮನೆಗೆ ಬೆಂಕಿ ತಗುಲಿದೆ. ಅದೃಷ್ಟವಶಾತ್ ಮನೆಯಲ್ಲಿದ್ದ ಬಾಲಕ, ಮೂವರು ಮಹಿಳೆಯರು ಸೇರಿದಂತೆ ಐದು ಜನ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮದ್ದೂರು ತಾಲೂಕಿನ ವಳಗೆರೆಹಳ್ಳಿಯಲ್ಲಿ ಘಟನೆ ನಡೆದಿದೆ. ಮುತ್ತುರಾಜ್ ಎಂಬುವವರ ಮನೆಯಲ್ಲಿದ್ದ ವಿದ್ಯುತ್ ಉಪಕರಣ ಸೇರಿದಂತೆ 5 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗೆ ಸುಟ್ಟು ಹೋಗಿವೆ. ಮನೆಯ ಒಳಗೆ ನಿಲ್ಲಿಸಿದ್ದ ದ್ವಿಚಕ್ರ ವಾಹನವನ್ನು ಚಾರ್ಜಿಂಗ್ ಹಾಕಿದ್ದ ವೇಳೆಯಲ್ಲಿ ಏಕಾಏಕಿ ಸ್ಪೋಟಗೊಂಡಿದೆ.

ಸ್ಪೋಟದ ತೀವ್ರತೆಗೆ ಮನೆಯ ಕಿಟಕಿ ಗಾಜುಗಳು ಛಿದ್ರವಾಗಿವೆ. ಭಾರಿ ಬೆಂಕಿ ಕಾಣಿಸಿಕೊಂಡು ಇಡೀ ಮನೆಗೆ ವ್ಯಾಪಿಸಿದೆ. ಇದರ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿದ್ದು, ಮನೆಯಲ್ಲಿದ್ದವರು ಹೊರಗೆ ಬಂದು ಪ್ರಾಣಪಾಯದಿಂದ ಪಾರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...