
ಚಿಕ್ಕಮಗಳೂರು: ಚಾರ್ಮಡಿ ಘಾಟ್ ಪ್ರದೇಶದಲ್ಲಿ ಭೀಕರ ಕಾಡ್ಗಿಚ್ಚು ಸಂಭವಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇವಾಲಯದ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಒಂದೆಡೆ ಕಾಡ್ಗಿಚ್ಚು, ಇನ್ನೊಂದೆಡೆ ಬಿರುಗಳಿಯಿಂದಾಗಿ ಬೆಂಕಿಯ ಕೆನ್ನಾಲಿಗೆ ವೇಗವಾಗಿ ಸುತ್ತಮುತ್ತಲ ಪ್ರದೇಶಕ್ಕೆ ವ್ಯಾಪಿಸುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿ, ಅರಣ್ಯ ಇಲಾಖೆ ಸಿಬ್ಬಂದಿ ಕಾಡ್ಗಿಚ್ಚು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.
ಚಾರ್ಮಡಿ ಘಾಟಿಯ ಬಿದಿರುತಳ ಗ್ರಾಮದಲ್ಲಿ ನಾಲ್ಕುದಿನಗಳ ಹಿಂದೆ ಬೆಂಕಿ ಕಾಣಿಸಿಕೊಂಡಿತ್ತು. 500 ಎಕರೆಗೂ ಅಧಿಕ ಪ್ರದೇಶ ಬೆಂಕಿಗಾಹುತಿಯಾಗಿದೆ.