
ಚಿಕ್ಕಮಗಳೂರು: ಚಾರ್ಮಾಡಿ ಘಾಟ್ 10ನೇ ತಿರುವಿನಲ್ಲಿ ಸ್ವಲ್ಪ ಪ್ರಮಾಣದಲ್ಲಿ ಭೂಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಸುಮಾರು ಒಂದು ತಿಂಗಳುಗಳಿಂದಲೂ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ ಚಾರ್ಮಾಡಿ ಘಾಟಿಯ ಹತ್ತನೇ ತಿರುವಿನಲ್ಲಿ ಭೂಕುಸಿತವಾಗಿದೆ. ಬಣಕಲ್ ಠಾಣೆ ಪೊಲೀಸರು ಕೊಟ್ಟಿಗೆಹಾರದಲ್ಲಿ ಭಾರಿ ವಾಹನಗಳನ್ನು ತಡೆದಿದ್ದಾರೆ. ಮಳೆ ಹೀಗೆ ಮುಂದುವರೆದರೆ ಮಣ್ಣು ತೆರವು ಕಾರ್ಯಾಚರಣೆ ಕಷ್ಟವಾಗಲಿದ್ದು, ಮಾರ್ಗ ಸಂಪೂರ್ಣ ಬಂದ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.