ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ಎರಡು ಸರ್ಕಾರಿ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಚಾಲಕರ ಕಾಲುಗಳಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ಘಟನೆ ನಡೆದಿ,ದ್ದು ಎರಡು ಸರ್ಕಾರಿ ಬಸ್ ಗಳಲ್ಲಿದ್ದ 80ಕ್ಕೂ ಹೆಚ್ಚು ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
ರಸ್ತೆ ಕಾಮಗಾರಿಯೇ ಅಪಘಾತಕ್ಕೆ ಕಾರಣವೆಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ರಸ್ತೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಚಾರ್ಮಾಡಿ ಘಾಟ್ ನಲ್ಲಿ ಭಾರಿ ಪ್ರಮಾಣದ ಮಂಜು ಕವಿದಿದೆ. ಒಂದು ಅಡಿ ದೂರದಲ್ಲಿ ಇರುವವರು ಕೂಡ ಕಾಣದಂತೆ ಮಂಜು ಆವರಿಸಿದೆ. ಇದರಿಂದಾಗಿ ಚಾರ್ಮಾಡಿ ಘಾಟ್ ನಲ್ಲಿ ಕಿಲೋಮೀಟರ್ ವರೆಗೆ ಟ್ರಾಫಿಕ್ ಜಾಮ್ ಉಂಟಾಗಿದೆ. ಕೆಲವು ಪ್ರಯಾಣಿಕರು 10 ಕಿ.ಮೀ. ನಡೆದು ಕೊಟ್ಟಿಗೆಹಾರ ತಲುಪಿದ್ದಾರೆ.