alex Certify ‘ಚಾರ್ಮಾಡಿ ಘಾಟ್’ ನಲ್ಲಿ ಪ್ರವಾಸಿಗರ ಹುಚ್ಚಾಟ : ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್, ಟ್ರಾಫಿಕ್ ಜಾಮ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಚಾರ್ಮಾಡಿ ಘಾಟ್’ ನಲ್ಲಿ ಪ್ರವಾಸಿಗರ ಹುಚ್ಚಾಟ : ರಸ್ತೆ ಮಧ್ಯೆ ವಾಹನ ನಿಲ್ಲಿಸಿ ಡ್ಯಾನ್ಸ್, ಟ್ರಾಫಿಕ್ ಜಾಮ್

ಚಾರ್ಮಾಡಿ ಘಾಟ್ ನಲ್ಲಿ ಪ್ರವಾಸಿಗರು  ಹುಚ್ಚಾಟ ಮೆರೆದಿದ್ದು, ರಸ್ತೆ ಮದ್ಯೆ ಬೇಕಾಬಿಟ್ಟಿ ವಾಹನ ನಿಲ್ಲಿಸಿ ಡ್ಯಾನ್ಸ್ ಮಾಡಿದ ಘಟನೆ ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ.

ಬೇಕಾಬಿಟ್ಟಿ ವಾಹನ ಪಾರ್ಕ್ ಮಾಡಿ ರಸ್ಯೆ ಮಧ್ಯೆ ಡ್ಯಾನ್ಸ್ ಮಾಡುವ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಪಾಯದಿಂದ ಕೂಡಿದ ರಸ್ತೆಯಲ್ಲಿ ಪ್ರವಾಸಿಗರು ಮೋಜು ಮಸ್ತಿ ಮಾಡಿದ್ದು, ಇದರಿಂದ ಟ್ರಾಫಿಕ ಜಾಮ್ ಉಂಟಾಗಿ ವಾಹನ ಸವಾರರು ಪರದಾಡಿದ್ದಾರೆ. ಪುಂಡರ ಪುಂಡಾಟಕ್ಕೆ ಬ್ರೇಕ್ ಹಾಕುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.

ಚಾರ್ಮಾಡಿ ಘಾಟಿಯಲ್ಲಿ ದಟ್ಟವಾದ ಮಂಜು ಕೂಡ ಇದ್ದು, ಎದುರಿನಿಂದ ಬರುವ ವಾಹನಗಳು ಸರಿಯಾಗಿ ಕಾಣಿಸೋದಿಲ್ಲ. ಅಲ್ಲದೇ ರಸ್ತೆಗಳು ತಿರುವು ಮುರುವಿನಿಂದ ಕೂಡಿದ್ದು, ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಇದರ ನಡುವೆ ಪ್ರವಾಸಿಗರು ಹುಚ್ಚಾಟ ಮೆರೆದಿದ್ದು, ಸಾರ್ವಜನಿಕರು ಪುಂಡರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಸಾಂದರ್ಭಿಕ ಚಿತ್ರ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...