ಮಂಗಳೂರು: ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ನಿರ್ಬಂಧ ವಿಧಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 73 ಮಂಗಳೂರು -ತುಮಕೂರು ರಸ್ತೆಯ 75 ಕಿಲೋಮೀಟರ್ ಚಾರ್ಮಾಡಿ ಗ್ರಾಮದಿಂದ ದಕ್ಷಿಣಕನ್ನಡ ಜಿಲ್ಲೆ ಗಡಿವರೆಗಿನ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಡಿಸೆಂಬರ್ 18 ರಿಂದ ಮುಂದಿನ ಆದೇಶದವರೆಗೆ ದಿನದ 24 ಗಂಟೆಗಳ ಕಾಲ ಲಘು, ಘನ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿದ್ದು, ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.