alex Certify ಗಮನಿಸಿ…! ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ…! ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ನಿಷೇಧ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ನಲ್ಲಿ ರಾತ್ರಿ ವೇಳೆ ವಾಹನ ನಿಷೇಧಿಸಲಾಗಿದೆ. ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರ ನಿಷೇಧಿಸಲಾಗಿದ್ದು, ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎಂ ರಮೇಶ್ ಆದೇಶ ಹೊರಡಿಸಿದ್ದಾರೆ.

ರಸ್ತೆಗೆ ಮರಗಳು ಉರುಳುತ್ತಿದ್ದು, ಭೂಕುಸಿತವಾಗುವ ಸಾಧ್ಯತೆ ಹಿನ್ನಲೆಯಲ್ಲಿ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಶಿರಾಡಿಘಾಟ್ ಬಂದ್ ಆಗಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ವಾಹನಗಳು ಚಾರ್ಮಾಡಿ ಘಾಟ್ ಮೂಲಕ ಸಂಚರಿಸುತ್ತಿವೆ. ಭಾರೀ ಮಳೆ ಕಾರಣದಿಂದ ವಾಹನ ಸಂಚಾರ ಬಂದ್ ಮಾಡಲಾಗಿದೆ.

ಹಾಸನ  -ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಸಕಲೇಶಪುರ ಸಮೀಪದ  ದೋಣಿಗಲ್ ಬಳಿ ಭೂ ಕುಸಿತ ಉಂಟಾಗಿದ್ದು, ಶಿರಾಡಿ ಘಾಟ್ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...