ಮಂಡ್ಯ : ಮಂಡ್ಯ ಅಖಾಡಕ್ಕೆ ಮೋಹಕ ತಾರೆ ರಮ್ಯಾ ಎಂಟ್ರಿ ಕೊಡುತ್ತಿದ್ದು, ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಪರ ರಮ್ಯಾ ಚುನಾವಣಾ ರಣಕಹಳೆ ಮೊಳಗಿಸಲಿದ್ದಾರೆ.
ಯೆಸ್, ಸ್ಟಾರ್ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮಾಜಿ ಸಂಸದೆ, ನಟಿ ರಮ್ಯಾ ಪ್ರಚಾರಕ್ಕೆ ಬರುವುದಕ್ಕೆ ಒಪ್ಪಿಗೆ ಕೊಟ್ಟಿದ್ದಾರಂತೆ. ಮುಂದಿನ ವಾರ ಅಭ್ಯರ್ಥಿ ಜೊತೆ ರಮ್ಯಾ ರೋಡ್ ಶೋ ನಡೆಸುವ ಸಾಧ್ಯತೆ ಇದೆ.
ಏಪ್ರಿಲ್ 17 ಅಥವಾ 20 ರಂದು ಮಂಡ್ಯದಲ್ಲಿ ಬೃಹತ್ ಸಮಾವೇಶ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಕೂಡ ಸಕ್ಕರೆ ನಾಡು ಮಂಡ್ಯದಲ್ಲಿ ಭರ್ಜರಿ ಪ್ರಚಾರ ನಡೆಸಲಿದ್ದಾರೆ.