![](https://kannadadunia.com/wp-content/uploads/2022/08/531099-arrest.jpg)
ಬೆಂಗಳೂರು: ವಾಟ್ಸಾಪ್ ನಲ್ಲಿ ಹುಡುಗಿಯಂತೆ ಚಾಟ್ ಮಾಡಿ ಲೈಂಗಿಕ ಆಮಿಷವೊಡ್ಡಿ ಹಣ ವಸೂಲಿ ಮಾಡುತ್ತಿದ್ದ ವ್ಯಕ್ತಿಯನ್ನು ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅನಿತಾ ಎನ್ನುವ ಹೆಸರಲ್ಲಿ ವ್ಯಕ್ತಿಯೊಬ್ಬರ ಸಂಪರ್ಕಿಸಿದ್ದ ಆರೋಪಿ ವಾಟ್ಸಾಪ್ ನಲ್ಲಿ ಚಾಟ್ ಮಾಡಿದ್ದಾನೆ. ಮಾರ್ಚ್ ಮಾಡಿದ ಫೋಟೋ ಬಳಸಿಕೊಂಡು ಚಾಟ್ ಸಮೇತ ತೋರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಸಿ ಹಣ ವಸೂಲಿ ಮಾಡಿದ್ದಾನೆ. ಈ ಕುರಿತಾಗಿ ಪ್ರಕರಣ ದಾಖಲಿಸಿಕೊಂಡ ಬೆಂಗಳೂರು ಉತ್ತರ ವಿಭಾಗದ ಸೈಬರ್ ಕ್ರೈಂ ಠಾಣೆ ಪೋಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.