![](https://kannadadunia.com/wp-content/uploads/2025/02/naxal1.jpg)
ಛತ್ತೀಸ್ ಗಢದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚರಣೆ ಚುರುಕುಗೊಂಡಿದೆ. ಭದ್ರತಾಪಡೆ ಸಿಬ್ಬಂದಿಗಳು 31 ನಕ್ಸಲರನ್ನು ಸದೆಬಡಿದಿದ್ದಾರೆ.
ಛತ್ತೀಸ್ ಗಢದ ಬಿಜಾಪುರ್ ಜಿಲ್ಲೆಯಲ್ಲಿ ಪೊಲೀಸರು ಹಾಗೂ ಭದ್ರತಾಪಡೆ ಸಿಬ್ಬಂದಿಗಳು ನಕ್ಸಲರ ವಿರುದ್ಧ ಜಂಟಿ ಕಾರ್ಯಾಚರಣೆ ಕಾರ್ಯಾಚಮುಂದುವರೆಸಿದ್ದು, 31 ಮಾವೋವಾದಿಗಳನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ. ನಕ್ಸಲರು ಹಾಗೂ ಭದ್ರತಾಪಡೆ ಸಿಬ್ಬಂದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಘಟನೆಯಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ ನಕ್ಲಸರ ಬಳಿ ಇದ್ದ ಅಪಾರ ಪ್ರಮಾಣ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
ಮತ್ತೊಂದೆಡೆ ಅಡಗಿರುವ ನಕ್ಸಲರಿಗಾಗಿ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ ಎಂದು ತಿಳಿದುಬಂದಿದೆ.