
ಸುಕ್ಮಾ: ಛತ್ತೀಸ್ ಗಡದಲ್ಲಿ ನಕ್ಸಲರ ವಿರುದ್ಧದ ಕಾರ್ಯಾಚಾರಣೆ ಮುಂದುವರೆದಿದೆ. ಇಲ್ಲಿನ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ನಕ್ಸಲರ ನಡುವೆ ಗುಂಡಿನ ಕಾಳಗ ನಡೆದಿದ್ದು, ಎನ್ ಕೌಂಟರ್ ಕಾರ್ಯಾಚಾರಣೆ ಮುಂದುವರೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಸುಕ್ಮಾದ ಕಿಸ್ತಾರಾಮ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆ ಹಾಗು ಪೊಲೀಸರು ನಕ್ಸಲರ ವಿರುದ್ಧ ಜಂಟಿ ಕಾರ್ಯಾಚಾರಣೆ ಕೈಗೊಂಡಿದ್ದಾರೆ. ನಕ್ಸಲರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಕಾರ್ಯಾಚಾರಣೆ ಕೈಗೊಳ್ಳಲಾಗಿದೆ.
ಜಿಲ್ಲಾ ಮೀಸಲು ಪೊಲೀಸ್ ಪಡೆ ಹಾಗೂ ಕೋಬ್ರಾ ಬೆತಾಲಿಯನ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ನಕ್ಸಲರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ ಎಂದು ತಿಳಿಸಿದ್ದಾರೆ.