
ಬೆಂಗಳೂರು : ಸಿನಿಮಾದಲ್ಲಿ ಚಾನ್ಸ್ ನೀಡುವುದಾಗಿ ಹಣ ವರ್ಗಾಯಿಸಿಕೊಂಡು ರಂಗಿನ ರಾಟೆ ಸಿನಿಮಾ ನಿರ್ದೇಶಕ ವಂಚನೆ ಮಾಡಿದ್ದಾರೆ ಎಂದು ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ರಂಗಿನ ರಾಟೆ ಸಿನಿಮಾದ ನಿರ್ದೇಶಕ ಸಂತೋಷ್ ಗೂಗಲ್‌ಪೇ, ಫೋನ್ಪೇ ಮೂಲಕ ಹಣ ವರ್ಗಾಯಿಸಿಕೊಂಡು ವಂಚನೆ ಎಸಗಿದ್ದಾರೆ ಎಂದು ಯಶವಂತಪುರ ಪೊಲೀಸ್ ಠಾಣೆಗೆ ಸಂತ್ರಸ್ತ ಯುವತಿ ದೂರು ನೀಡಿದ್ದಾರೆ.
ಸಿನಿಮಾದಲ್ಲಿ ಚಾನ್ಸ್ ಕೊಡಿಸುವುದಾಗಿ ನಂಬಿಸಿ ನಿರ್ದೇಶಕ ಸಂತೋಷ್ ಹಂತ ಹಂತವಾಗಿ ಹಣ ಹಾಕಿಸಿಕೊಂಡು ವಂಚನೆ ಮಾಡಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದು, ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.