alex Certify ಸಚಿವ ನಾಗೇಂದ್ರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ನಾಗೇಂದ್ರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಕ್ರೀಡಾ ಸಚಿವ ಬಿ. ನಾಗೇಂದ್ರ ಅವರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.

ವಿ.ಎಸ್.ಎಲ್. ಸ್ಟೀಲ್ ಕಂಪನಿ ವ್ಯವಸ್ಥಾಪಕ ರಾಘವೇಂದ್ರ ಘೋಡ್ಕೆ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನುರಹಿತ ವಾರಂಟ್ ಜಾರಿ ಮಾಡಿದ್ದು, ಅಕ್ಟೋಬರ್ 31ಕ್ಕೆ ಮುಂದಿನ ವಿಚಾರಣೆ ಮುಂದೂಡಿದೆ.

ನ್ಯಾಯಾಲಯಕ್ಕೆ ಹಾಜರಾಗುವಂತೆ ನಾಗೇಂದ್ರ ಅವರಿಗೆ ಮೂರು ಬಾರಿ ಕೋರ್ಟ್ ಆದೇಶ ನೀಡಿದ್ದರೂ ಅವರು ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ ಆದೇಶಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...