ಬೆಂಗಳೂರು : ರಾಜ್ಯದ ವಿವಿಧೆಡೆ ಕಲುಷಿತ ನೀರು ಸೇವನೆಯಿಂದ ಜನರು ಅಸ್ವಸ್ಥಗೊಂಡಿರುವ ಪ್ರಕರಣಗಳು ಆತಂಕ ಉಂಟುಮಾಡಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಗುಣಮಟ್ಟ ಪರಿಶೀಲಿಸಿ ನೀರು ಪೂರೈಸಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಬೆಂಗಳೂರಿನ ನಾಗರಿಕರಿಗೆ ಪೂರೈಸುವ ಕುಡಿಯುವ ನೀರು ಹಾಗೂ ಬೋರ್ ವೆಲ್ ನೀರನ್ನು ಒಳಗೊಂಡಂತೆ ಪ್ರಯೋಗಾಲಯದಲ್ಲಿ ನೀರಿನ ಗುಣಮಟ್ಟವನ್ನು ಪರಿಶೀಲಿಸಿ, ಉತ್ತಮ ಗುಣಮಟ್ಟದ ಕುಡಿಯುವ ನೀರನ್ನು ಸರಬರಾಜು ಮಾಡಲು ಹಾಗೂ ಕುಡಿಯುವ ನೀರಿನಿಂದ ಯಾವುದೇ ಆರೋಗ್ಯ ಸಮಸ್ಯೆ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಬಿಬಿಎಂಪಿಯ ಮುಖ್ಯ ಆಯುಕ್ತರಿಗೆ, ಜಿಲ್ಲಾ ಪಂಚಾಯತ್’ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ, ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧ್ಯಕ್ಷರಿಗೆ ಪತ್ರ ಬರೆದು ಸೂಚಿಸಿದ್ದೇನೆ.
ತಪ್ಪಿದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುತ್ತದೆ. ಬೆಂಗಳೂರಿನ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವುದು ನಮ್ಮ ಆದ್ಯತೆ ಹಾಗೂ ಬದ್ಧತೆಯಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.