ಬೆಳಗಾವಿ(ಸುವರ್ಣಸೌಧ): ಬರ ಪರಿಸ್ಥಿತಿ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗುವ ದೃಷ್ಟಿಯಿಂದ ಕೃಷಿಭಾಗ್ಯ ಯೋಜನೆಯನ್ನು ಮರು ಜಾರಿಗೊಳಿಸುತ್ತಿದ್ದೇವೆ. ಈಗಾಗಲೇ ಪ್ರಕ್ರಿಯೆ ಅಂತಿಮ ಹಂತದಲ್ಲಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಅವರು ತಿಳಿಸಿದ್ದಾರೆ.
ಫಸಲ್ ಬಿಮಾ ಯೋಜನೆ
ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ 2023ರ ಮುಂಗಾರು ಹಂಗಾಮಿನ ಬೆಳೆ ಕಟಾವು ಪ್ರಯೋಗಗಳು ಅಂತಿಮ ಹಂತದಲ್ಲಿದ್ದು, ಬೆಳೆ ಕಟಾವು ಪ್ರಯೋಗಗಳ ಅಂತಿಮ ಇಳುವರಿ ಆಧಾರದ ಮೇಲೆ ಇಳುವರಿ ಕೊರತೆಗಣುಗುಣವಾಗಿ ಬೆಳೆ ವಿಮೆ ಪರಿಹಾರ ಲೆಕ್ಕಚಾರ ಮಾಡಿ ವಿಮಾ ಸಂಸ್ಥೆಯವರಿಂದ ಕಾಲಮಿತಿಯಲ್ಲಿ ಇತ್ಯರ್ಥಪಡಿಸಲು ಕ್ರಮ ಜರುಗಿಸಲಾಗುತ್ತಿದೆ ಎಂದು ಚೆಲುವರಾಯಸ್ವಾಮಿ ತಿಳಿಸಿದ್ದಾರೆ.