ಬೆಂಗಳೂರು: ರಾಜ್ಯದಲ್ಲಿ ಈ ವರ್ಷ ಇದುವರೆಗೆ ಶೇಕಡ 25 ರಷ್ಟು ಮಳೆ ಕೊರತೆ ಉಂಟಾಗಿದ್ದು, 130 ಕ್ಕೂ ಅಧಿಕ ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಮುಂದಿನ ವಾರ ಬರ ಘೋಷಣೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ಬರ ಪರಿಸ್ಥಿತಿ ಇರುವುದರಿಂದ ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಜಂಟಿ ಸಮೀಕ್ಷೆ ನಡೆಸಲಾಗುವುದು. ಬೆಳೆ ಪರಿಸ್ಥಿತಿ ವಾಸ್ತವ ವರದಿ ಸಲ್ಲಿಸಲು ತಿಳಿಸಲಾಗುವುದು. ರಾಜ್ಯದಲ್ಲಿ ಶೇಕಡ 79 ರಷ್ಟು ಬಿತ್ತನೆಯಾಗಿದ್ದು, ಮಳೆ ಇಲ್ಲದೆ ಬೆಳೆಗಳು ಒಣಗುತ್ತಿವೆ. ಸಂಪುಟ ಉಪಸಮಿತಿಯ ತೀರ್ಮಾನದಂತೆ ತೀವ್ರ ಬರ ಪೀಡಿತ ಪ್ರದೇಶಗಳಲ್ಲಿ ಬೆಳೆ ಪರಿಸ್ಥಿತಿ ಸಮೀಕ್ಷೆ ಮಾಡಲು ಈಗಾಗಲೇ ಅಧಿಕಾರಿಗಳ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.