ಮಂಗಳೂರು: ಕೃಷಿ ಇಲಾಖೆಯಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ.
ಧರ್ಮಸ್ಥಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೃಷಿ ಇಲಾಖೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಗಂಭೀರ ಚಿಂತನೆ ನಡೆಸಿದ್ದು, ಪ್ರಸ್ತುತ 350 ಹುದ್ದೆಗಳ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ. 2000 ಕಾಲಿ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕಳಿಸಲಾಗಿದೆ ಎಂದು ತಿಳಿಸಿದ್ದಾರೆ.
ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಹಕಾರ ಸಂಘಗಳ ಮೂಲಕ 5 ಲಕ್ಷ ರೂ. ಸಾಲ ನೀಡಲು ಸರ್ಕಾರ ಆದೇಶ ನೀಡಿದ್ದು, ನಾನಾ ಕಾರಣಗಳಿಂದ ಹೆಚ್ಚುವರಿ ಸಾಲ ಬಿಡುಗಡೆ ಆಗದಿರುವ ಮಾಹಿತಿ ಇದೆ. ಈ ಬಗ್ಗೆ ಸಹಕಾರ ಸಚಿವರೊಂದಿಗೆ ಚರ್ಚಿಸಿ ಸಾಲ ಕೊಡಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.