alex Certify ಒಳ ಉಡುಪಿನಲ್ಲಿತ್ತು ಅಪಾರ ಪ್ರಮಾಣದ ಚಿನ್ನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಳ ಉಡುಪಿನಲ್ಲಿತ್ತು ಅಪಾರ ಪ್ರಮಾಣದ ಚಿನ್ನ

ಚೆನ್ನೈ: ಒಳ ಉಡುಪಿನಲ್ಲಿ ಡೈರಿ ಮಿಲ್ಕ್ ಚಾಕೊಲೇಟ್ ರ್ಯಾಪರ್ ನಲ್ಲಿ ಸಾಗಿಸುತ್ತಿದ್ದ ಭಾರೀ ಪ್ರಮಾಣದ ಚಿನ್ನ ಸೇರಿ ಸುಮಾರು 2 ಕೋಟಿ ರೂಪಾಯಿ ಮೌಲ್ಯದ 3.72 ಕೆಜಿ ಚಿನ್ನವನ್ನು ಚೆನ್ನೈ ಏರ್ಪೋರ್ಟ್ ನಲ್ಲಿ ಜಪ್ತಿ ಮಾಡಲಾಗಿದೆ.

ಶಾರ್ಜಾದಿಂದ ಆಗಮಿಸಿದ್ದ ಪ್ರಯಾಣಿಕನೊಬ್ಬನ ಬಳಿ ಭಾರಿ ಪ್ರಮಾಣದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ದುಬೈ ಎಮಿರೇಟ್ಸ್ ವಿಮಾನದಲ್ಲಿ ಆಗಮಿಸಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆಗೊಳಪಡಿಸಿದಾಗ ಒಳ ಉಡುಪಿನಲ್ಲಿ ಡೈರಿ ಮಿಲ್ಕ್ ಚಾಕೊಲೇಟ್ ರ್ಯಾಪರ್ ಕಂಡು ಬಂದಿದೆ. ಅದನ್ನು ಪರಿಶೀಲಿಸಿದಾಗ ಪೇಸ್ಟ್ ರೂಪದಲ್ಲಿದ್ದ ಚಿನ್ನವನ್ನು ಚಾಕೊಲೇಟ್ ರ್ಯಾಪರ್ ನಲ್ಲಿ ಅಡಗಿಸಿಟ್ಟಿರುವುದು ಕಂಡು ಬಂದಿದೆ. ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪದ್ಮ ಬಾಲಾಜಿ(25)ಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

ಬುಧವಾರ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ 11 ಪ್ರಯಾಣಿಕರಿಂದ 1.14 ಕೋಟಿ ರೂಪಾಯಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...