alex Certify ಸಿಲಿಂಡರ್ ಹೊತ್ತೊಯ್ಯುತ್ತಿದ್ದಾಗ ಜಾರಿ ಬಿದ್ದು ಎಲ್‌ಪಿಜಿ ಡೆಲಿವರಿ ಏಜೆಂಟ್ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಲಿಂಡರ್ ಹೊತ್ತೊಯ್ಯುತ್ತಿದ್ದಾಗ ಜಾರಿ ಬಿದ್ದು ಎಲ್‌ಪಿಜಿ ಡೆಲಿವರಿ ಏಜೆಂಟ್ ಸಾವು

ಚೆನ್ನೈ: ಸಿಲಿಂಡರ್ ಹೊತ್ತೊಯ್ಯುತ್ತಿದ್ದ ವೇಳೆ ಜಾರಿಬಿದ್ದ ಪರಿಣಾಮ 52 ವರ್ಷದ ಎಲ್‌ಪಿಜಿ ಡೆಲಿವರಿ ಏಜೆಂಟ್ ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ತಮಿಳುನಾಡಿನ ಚೆನ್ನೈನ ನನ್ಮಂಗಲಂ ಪ್ರದೇಶದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಫ್ರಾನ್ಸಿಸ್ ಎಂದು ಗುರುತಿಸಲಾಗಿದೆ. ಭುಜದ ಮೇಲೆ ಸಿಲಿಂಡರ್ ಹೊತ್ತೊಯ್ಯುತ್ತಿದ್ದಾಗ ಫ್ರಾನ್ಸಿಸ್ ಜಾರಿ ಬಿದ್ದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಇತ್ತೀಚೆಗಷ್ಟೇ ಸುರಿದ ಭಾರಿ ಮಳೆಯಿಂದ ರಸ್ತೆ ಜಾರುತ್ತಿದ್ದರಿಂದ ಫ್ರಾನ್ಸಿಸ್ ಸಿಲಿಂಡರ್ ಮೇಲೆತ್ತುತ್ತಿದ್ದಂತೆ ನೆಲಕ್ಕೆ ಬಿದ್ದಿದ್ದಾರೆ. ಸಿಲಿಂಡರ್ ಫ್ರಾನ್ಸಿಸ್ ಅವರ ಕುತ್ತಿಗೆಯ ಮೇಲೆ ಬಿದ್ದಿದ್ದರಿಂದ ತೀವ್ರ ರಕ್ತ ಸ್ರಾವವಾಗಿದೆ. ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಪೊಲೀಸರು, ಆಕಸ್ಮಿಕ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...