alex Certify ಹೋಟೆಲ್ ಗೆ ಮಹಿಳೆ ಕರೆಸಿಕೊಂಡು ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ: ಸಾಫ್ಟ್ ವೇರ್ ಇಂಜಿನಿಯರ್ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೋಟೆಲ್ ಗೆ ಮಹಿಳೆ ಕರೆಸಿಕೊಂಡು ಮದ್ಯ ಕುಡಿಸಿ ಲೈಂಗಿಕ ದೌರ್ಜನ್ಯ: ಸಾಫ್ಟ್ ವೇರ್ ಇಂಜಿನಿಯರ್ ಅರೆಸ್ಟ್

ಚೆನ್ನೈ: ಲೈಂಗಿಕ ದೌರ್ಜನ್ಯದ ಮತ್ತೊಂದು ಆಘಾತಕಾರಿ ಘಟನೆಯಲ್ಲಿ ತಮಿಳುನಾಡಿನ ಶೋಲಿಂಗನಲ್ಲೂರಿನಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 27 ವರ್ಷದ ಯುವಕನನ್ನು ಬಂಧಿಸಲಾಗಿದೆ.

ಆರೋಪಿ ಕಳೆದ ವರ್ಷ ಆಗಸ್ಟ್‌ ನಲ್ಲಿ ತನ್ನನ್ನು ಹೋಟೆಲ್‌ ಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದ ಎಂದು ಸಂತ್ರಸ್ತೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಆರೋಪಿಯನ್ನು ಸಾಫ್ಟವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ರಾಹುಲ್ ಎಂದು ಗುರುತಿಸಲಾಗಿದೆ. 27 ವರ್ಷದ ಆರೋಪಿ ಮ್ಯಾಟ್ರಿಮೋನಿಯಲ್ ವೆಬ್‌ ಸೈಟ್ ಮೂಲಕ ಮಹಿಳೆಯ ಪರಿಚಯ ಮಾಡಿಕೊಂಡಿದ್ದಾನೆ.

ಮಹಿಳೆ ಹಾಗೂ ರಾಹುಲ್ ಮೂರು ತಿಂಗಳಿಗೂ ಹೆಚ್ಚು ಕಾಲ ಸಾಮಾಜಿಕ ಮಾಧ್ಯಮದಲ್ಲಿ ಮಾತನಾಡಿದ್ದಾರೆ. ಮ್ಯಾಟ್ರಿಮೋನಿಯಲ್ ಪೋರ್ಟಲ್ ಮೂಲಕ ಪರಸ್ಪರ ತಿಳಿದ ನಂತರ, ಇಬ್ಬರೂ ಸೆಮ್ಮೆಂಚೇರಿಯ ಹೋಟೆಲ್‌ನಲ್ಲಿ ಭೇಟಿಯಾಗಲು ನಿರ್ಧರಿಸಿದ್ದರು.

ರಾತ್ರಿ ಊಟ ಮಾಡುತ್ತಿದ್ದಾಗ ಆಕೆಗೆ ಮದ್ಯಪಾನ ಮಾಡಿಸಿ, ಪ್ರಜ್ಞಾಹೀನಳಾಗಿ ಬಿದ್ದ ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ರಾಹುಲ್ ಆಕೆಯನ್ನು ಮದುವೆಯಾಗುವುದಾಗಿ ಹೇಳಿದ್ದ. ಆದರೆ ನಂತರ ನಿರಾಕರಿಸಿದ್ದ.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ತಂಡ, 5 ತಿಂಗಳ ನಂತರ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ಗಿಂಡಿ ಎಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...