
ಟೆಸ್ಟ್ ಕ್ರಿಕೆಟ್ ನಲ್ಲಿ ಹಲವಾರು ದಾಖಲೆ ಬರೆದಿರುವ ಬಲಗೈ ಬ್ಯಾಟ್ಸ್ಮನ್ ಚೇತೇಶ್ವರ ಪೂಜಾರ ಇಂದು ತಮ್ಮ 36 ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಟೆಸ್ಟ್ ಕ್ರಿಕೆಟಿಗೆಂದೆ ಸೀಮಿತರಾಗಿರುವ ಇವರು ಒಂದೇ ಇನ್ನಿಂಗ್ಸ್ ನಲ್ಲಿ 525 ಬೌಲ್ಗಳನ್ನು ಫೇಸ್ ಮಾಡುವ ಮೂಲಕ ಹೊಸ ದಾಖಲೆ ಬರೆದಿದ್ದರು. ಹಾಗೂ ಟೆಸ್ಟ್ ಕ್ರಿಕೆಟ್ ನಲ್ಲಿ ಅತಿ ವೇಗವಾಗಿ ಸಾವಿರ ರನ್ ಪೂರೈಸಿದ ಭಾರತದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.
2010 ಅಕ್ಟೋಬರ್ ಒಂಬತ್ತರಂದು ಭಾರತ – ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ ಇವರು ಇದುವರೆಗೂ 103 ಟೆಸ್ಟ್ ಗಳನ್ನು ಆಡಿದ್ದು, ಇದುವರೆಗೂ 7195 ರನ್ ಬಾರಿಸಿದ್ದಾರೆ. ಇದರಲ್ಲಿ 19 ಶತಕ ಮತ್ತು 35 ಅರ್ಧ ಶತಕವಿದೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಹಲವಾರು ಕ್ರಿಕೆಟಿಗರು ಚೇತೇಶ್ವರ ಪೂಜಾರ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.