ಛತ್ತೀಸ್ ಗಢದ ಬಿಜಾಪುರದಲ್ಲಿ ನಕ್ಸಲರ ವಿರುದ್ಧ ಭದ್ರತಾ ಪಡೆಗಳ ಎನ್ ಕೌಂಟರ್ ಕಾರ್ಯಾಚರಣೆ ಮುಂದುವರೆದಿದ್ದು, ಇಂದು ಮತ್ತೆ 13 ನಕ್ಸಲರನ್ನು ಸದೆಬಡಿಯಲಾಗಿದೆ.
ಛತ್ತೀಸ್ ಗಢದ ಬಿಜಾಪುರದಲ್ಲಿ ಸತತ ಎಂಟು ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಒಟ್ಟು 13 ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಮೂರು ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ.
ಲೆಂಡಾ ಗ್ರಾಮದ ಅರಣ್ಯದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಭದ್ರತಾ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿ ಎನ್ ಕೌಂಟರ್ ಮಾಡಿದ್ದಾರೆ. ಇತ್ತೀಚಿನ ವರ್ಷದಗಳಲ್ಲಿ ನಡೆದ ಅತಿದೊಡ್ಡ ನಕ್ಸಲ್ ವಿರುದ್ಧ ಕಾರ್ಯಾಚರಣೆ ಇದಾಗಿದೆ.
ಒಟ್ಟು 13 ನಕ್ಸಲರು ಹತರಾಗಿದ್ದು, ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ. ಬಸ್ತಾರ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬಿಜಾಪುರದಲ್ಲಿ ನಕ್ಸಲರು ಇರುವ ಬಗ್ಗೆ ಸುಳಿವು ದೊರೆತ ಹಿನ್ನೆಲೆಯಲ್ಲಿ ಕೇಂದ್ರೀಯ ಮೀಸಲು ಪಡೆ, ವಿಶೇಷ ಕಾರ್ಯಪಡೆ, ಕಮಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ ಸಿಬ್ಬಂದಿಗಳನ್ನು ಒಳಗೊಂಡ ಭದ್ರತಾ ಅಧಿಕಾರಿಗಳ ತಂಡ ಈ ಕಾರ್ಯಾಚರಣೆ ನಡೆಸಿದೆ.