alex Certify ಟ್ರಕ್ ಗೆ ಆಟೋ ಡಿಕ್ಕಿ: 7 ವಿದ್ಯಾರ್ಥಿಗಳು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರಕ್ ಗೆ ಆಟೋ ಡಿಕ್ಕಿ: 7 ವಿದ್ಯಾರ್ಥಿಗಳು ಸಾವು

ಛತ್ತೀಸ್‌ ಗಢದ ಕಂಕೇರ್ ಜಿಲ್ಲೆಯಲ್ಲಿ ಗುರುವಾರ ಆಟೋವೊಂದು ಟ್ರಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 7 ಶಾಲಾ ಮಕ್ಕಳು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಂಕೇರ್ ಜಿಲ್ಲೆಯ ಕೊರಾರ್ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ. ಗಾಯಾಳುಗಳನ್ನು ಕೊರಾರ್ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಂಕೇರ್ ಜಿಲ್ಲೆಯ ಕೊರಾರ್ ಚಿಲ್ಹಾಟಿ ಚೌಕ್‌ ನಲ್ಲಿ ಆಟೋ ರಿಕ್ಷಾ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ ಶಾಲಾ ಮಕ್ಕಳು ಸಾವನ್ನಪ್ಪಿದ ಸುದ್ದಿ ಹೃದಯ ವಿದ್ರಾವಕವಾಗಿದೆ, ಘಟನೆಯಲ್ಲಿ ನಾಲ್ವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಆರೋಗ್ಯ ಇಲಾಖೆಯಿಂದ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುತ್ತಿದೆ. ಅವರಿಗೆ, ಮೃತರ ಕುಟುಂಬಗಳಿಗೆ ದೇವರು ಧೈರ್ಯ ನೀಡಲಿ. ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಆಡಳಿತಕ್ಕೆ ಸೂಚನೆಗಳನ್ನು ನೀಡಲಾಗಿದೆ ಎಂದು ಛತ್ತೀಸ್‌ ಗಢ ಸಿಎಂ ಭೂಪೇಶ್ ಬಘೇಲ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...