ಬಿಲಾಸ್ ಪುರ: ಛತ್ತೀಸ್ ಗಢದ ಬಿಲಾಸ್ ಪುರ ಜಿಲ್ಲೆಯ ಶಾಲೆಯೊಂದರ ವಾಶ್ ರೂಂನಲ್ಲಿ 10ನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಬಾಲಕಿ ಕೋಟಿಪುರದ ಜವಾಹರ ನವೋದಯ ವಿದ್ಯಾಲಯದ ವಿದ್ಯಾರ್ಥಿನಿಯಾಗಿದ್ದಾಳೆ. ವಿದ್ಯಾರ್ಥಿನಿ ತನ್ನ ಬಾತ್ರೂಮ್ ನಲ್ಲಿ ವೆಂಟಿಲೇಟರ್ ಗೆ ದುಪಟ್ಟಾದಿಂದ ನೇಣು ಬಿಗಿದುಕೊಂಡಿದ್ದಾಳೆ. ಭಾನುವಾರ ಬೆಳಗ್ಗೆ ಆಕೆಯ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತೊಬ್ಬ ವಿದ್ಯಾರ್ಥಿನಿ ವಾಶ್ ರೂಂಗೆ ಹೋಗಿ ನೋಡಿದಾಗ ಬಾಲಕಿ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ. ಕೂಡಲೇ ಶಿಕ್ಷಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾಳೆ.
ಬಾಲಕಿಯನ್ನು ಏಮ್ಸ್ ಬಿಲಾಸ್‌ಪುರಕ್ಕೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವಳು ಮೃತಪಟ್ಟಿದ್ದಾಳೆ ಎಂದು ಘೋಷಿಸಿದರು. ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಬಿಲಾಸ್‌ಪುರದ ಏಮ್ಸ್ ನಲ್ಲಿ ನಡೆಸಲಾಯಿತು.
ಘಟನಾ ಸ್ಥಳದಿಂದ ಪೊಲೀಸರಿಗೆ ಯಾವುದೇ ಆತ್ಮಹತ್ಯೆ ಪತ್ರ ಸಿಕ್ಕಿಲ್ಲ. ಆತ್ಮಹತ್ಯೆಯ ಹಿಂದಿನ ಕಾರಣವನ್ನು ಪತ್ತೆ ಮಾಡಲಾಗುತ್ತಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಅಧೀಕ್ಷಕ(ಎಎಸ್ಪಿ) ಶಿವ ಚೌಧರಿ ಹೇಳಿದ್ದಾರೆ.