ಬಿಜಾಪುರ(ಛತ್ತೀಸ್‌ಗಢ): ಛತ್ತಿಸ್ ಗಢದ ಅರಣ್ಯ ಪ್ರದೇಶದಲ್ಲಿ ನಕ್ಸಲರ ಎನ್ ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದ ನಾಲ್ವರು ನಕ್ಸಲರ ಶವ ಪತ್ತೆಯಾಗಿದೆ.
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಾಲ್ವರು ನಕ್ಸಲರ ಶವಗಳನ್ನು ಭಾನುವಾರ ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನವೆಂಬರ್ 26 ರಂದು ಮಿರ್ತೂರ್ ಪೊಲೀಸ್ ಠಾಣಾ ವ್ಯಾಪ್ತಿಯ ಪೊಮ್ರಾ ಅರಣ್ಯದಲ್ಲಿ ಭದ್ರತಾ ಪಡೆಗಳ ಜಂಟಿ ತಂಡಗಳು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಎನ್‌ಕೌಂಟರ್ ನಡೆದಿತ್ತು.
ಭದ್ರತಾ ಪಡೆಗಳು ಸ್ಥಳದಲ್ಲಿದ್ದ ನಾಲ್ಕು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ. ಪೊಲೀಸ್ ಅಧಿಕಾರಿಯ ಪ್ರಕಾರ, ನಕ್ಸಲೀಯರಿಂದ ವಶಪಡಿಸಿಕೊಂಡ ನಾಲ್ಕು ಶಸ್ತ್ರಾಸ್ತ್ರಗಳ ಪೈಕಿ ಯುಎಸ್ ನಿರ್ಮಿತ ಸ್ವಯಂಚಾಲಿತ ಕಾರ್ಬೈನ್ ಕ್ಯಾಲಿಬರ್ 30 ಎಂ1 ರೈಫಲ್ ಕೂಡ ಸೇರಿದೆ ಎಂದು ಬಿಜಾಪುರ ಪೊಲೀಸ್ ವರಿಷ್ಠಾಧಿಕಾರಿ ಆಂಜನೇಯ ಹೇಳಿದ್ದಾರೆ.