ಬೆಂಗಳೂರು : ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ, 5 ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿರಲಿದ್ದಾರೆ ಎಂದು ಸಚಿವ ಜಮೀರ್ ಹೇಳಿದರು.
ಇಂದು ಸುದ್ದಿಗಾರರ ಜೊತೆ ಮಾತನಾಡಿ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಸಚಿವ ಜಮೀರ್ ಅಹ್ಮದ್ ಖಾನ್ ಆಪರೇಷನ್ ಕಮಲ ಅಸಾಧ್ಯ. ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಗಲು ಕನಸು ಕಾಣ್ತಿದ್ದಾರೆ. 56 ಜನ ಎಂಎಲ್ಎಗಳನ್ನು ಕರೆದುಕೊಂಡು ಹೋಗಿ ಆಪರೇಷನ್ ಮಾಡೋದು ಸಾಧ್ಯನಾ? ಎಂದು ಪ್ರಶ್ನಿಸಿದರು.
ರಮೇಶ್ ಜಾರಕಿಹೊಳಿ ಹೈಕಮಾಂಡ್ ಬಳಿ ಬೇಳೆ ಬೇಯಿಸಿಕೊಳ್ಳಲು ಹೀಗೆಲ್ಲಾ ಮಾತಾಡ್ತಿದ್ದಾರೆ. ರಮೇಶ್ ಮೊದಲು ಬಿಜೆಪಿಯಲ್ಲಿ ಇರೋ ಶಾಸಕರನ್ನು ಉಳಿಸಿಕೊಳ್ಳಲಿ. ನಂತರ ಕಾಂಗ್ರೆಸ್ ಶಾಸಕರನ್ನು ಕರೆಯಲಿ, ಬಿಜೆಪಿ ಶಾಸಕರು ಕಾಂಗ್ರೆಸ್ ಗೆ ಬರಲು ಒಂದೇ ಕಾಲಿನಲ್ಲಿ ನಿಂತಿದ್ದಾರೆ ಎಂದು ಜಮೀರ್ ಟಾಂಗ್ ನೀಡಿದರು.