BREAKING: ಕನ್ನಡಪರ ಹೋರಾಟಗಾರರ ಮೇಲಿನ ಕೇಸ್ ವಾಪಸ್: ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಕನ್ನಡಪರ ಹೋರಾಟಗಾರರ ಮೇಲಿನ ಕೇಸ್ ಹಿಂಪಡೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಪ್ರತಿಮೆ ಅನಾವರಣ ಮಾಡಿ ಮಾತನಾಡಿದ ಅವರು, ಅರ್ಜಿ ಕೊಟ್ಟರೆ ಕನ್ನಡ ಪರ ಹೋರಾಟಗಾರರ ಮೇಲಿರುವ ಪ್ರಕರಣಗಳನ್ನು ಹಿಂಪಡೆಯಲಾಗುವುದು. ಸಚಿವ ಸಂಪುಟಕ್ಕೆ ವಿಚಾರ ಹೋಗಬೇಕು. ಹಾಗಾಗಿ ಅರ್ಜಿ ಸಲ್ಲಿಸಬೇಕು ಎಂದು ಹೇಳಿದ್ದಾರೆ.

ವಿಶೇಷ ಪೂಜೆಯ ಮೂಲಕ ಭುವನೇಶ್ವರಿ ಪ್ರತಿಮೆ ಅನಾವರಣಗೊಳಿಸಲಾಗಿದ್ದು, ಸ್ಪೀಕರ್ ಯು.ಟಿ. ಖಾದರ್, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ರಾಮಲಿಂಗಾರೆಡ್ಡಿ, ಶಿವರಾಜ್ ತಂಗಡಗಿ, ಶಾಸಕ ರಿಜ್ವಾನ್ ಅರ್ಷದ್ ಇತರರು ಇದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read