ಬೆಳಗಾವಿ(ಸುವರ್ಣಸೌಧ): ಉದ್ದಿಮೆ ಸ್ಥಾಪನೆಗೆ 30 ದಿನದಲ್ಲಿ ಅನುಮತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಮಂಗಳವಾರ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಹೂಡಿಕೆದಾರರು ಉದ್ಯಮ ಸ್ಥಾಪನೆಗೆ ಸಲ್ಲಿಸಿದ ಅರ್ಜಿಗಳ ಬಗ್ಗೆ ಎಲ್ಲಾ ಇಲಾಖೆಗಳು ಕಾಲಮಿತಿಯಲ್ಲಿ ಅಭಿಪ್ರಾಯ ನೀಡಬೇಕು. ಎಲ್ಲಾ ಷರತ್ತುಗಳನ್ನು ಪೂರೈಸುವ ಸಂದರ್ಭದಲ್ಲಿ ಏಕಾಗವಾಕ್ಷಿ ವ್ಯವಸ್ಥೆಯಡಿ 30 ದಿನಗಳೊಳಗೆ ಅನುಮೋದನೆ ನೀಡಬೇಕು ಎಂದು ಸೂಚಿಸಿದ್ದಾರೆ.
ಸಮಿತಿಯ ಮುಂದೆ ಮಂಡಿಸಿದ ಪ್ರಸ್ತಾವನೆಗಳ ಪರಿಶೀಲಿಸಿದ ಸಿಎಂ, ಇಲ್ಲಿ ಒಪ್ಪಿಗೆ ಕೊಟ್ಟ ಬಳಿಕ ಕಡತಗಳು ಪುನಃ ವಿವಿಧ ಇಲಾಖೆಗಳಿಗೆ ಅಲೆದಾಡುವಂತಾಗಬಾರದು. ನಿಗದಿತ ಕಾಲಮಿತಿಯೊಳಗೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.