alex Certify BIG NEWS: ಉದ್ದಿಮೆ ಸ್ಥಾಪನೆಗೆ 30 ದಿನದಲ್ಲಿ ಅನುಮತಿ ನೀಡಲು ಸಿಎಂ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಉದ್ದಿಮೆ ಸ್ಥಾಪನೆಗೆ 30 ದಿನದಲ್ಲಿ ಅನುಮತಿ ನೀಡಲು ಸಿಎಂ ಸೂಚನೆ

ಬೆಳಗಾವಿ(ಸುವರ್ಣಸೌಧ): ಉದ್ದಿಮೆ ಸ್ಥಾಪನೆಗೆ 30 ದಿನದಲ್ಲಿ ಅನುಮತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಮಂಗಳವಾರ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಹೂಡಿಕೆದಾರರು ಉದ್ಯಮ ಸ್ಥಾಪನೆಗೆ ಸಲ್ಲಿಸಿದ ಅರ್ಜಿಗಳ ಬಗ್ಗೆ ಎಲ್ಲಾ ಇಲಾಖೆಗಳು ಕಾಲಮಿತಿಯಲ್ಲಿ ಅಭಿಪ್ರಾಯ ನೀಡಬೇಕು. ಎಲ್ಲಾ ಷರತ್ತುಗಳನ್ನು ಪೂರೈಸುವ ಸಂದರ್ಭದಲ್ಲಿ ಏಕಾಗವಾಕ್ಷಿ ವ್ಯವಸ್ಥೆಯಡಿ 30 ದಿನಗಳೊಳಗೆ ಅನುಮೋದನೆ ನೀಡಬೇಕು ಎಂದು ಸೂಚಿಸಿದ್ದಾರೆ.

ಸಮಿತಿಯ ಮುಂದೆ ಮಂಡಿಸಿದ ಪ್ರಸ್ತಾವನೆಗಳ ಪರಿಶೀಲಿಸಿದ ಸಿಎಂ, ಇಲ್ಲಿ ಒಪ್ಪಿಗೆ ಕೊಟ್ಟ ಬಳಿಕ ಕಡತಗಳು ಪುನಃ ವಿವಿಧ ಇಲಾಖೆಗಳಿಗೆ ಅಲೆದಾಡುವಂತಾಗಬಾರದು. ನಿಗದಿತ ಕಾಲಮಿತಿಯೊಳಗೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...