ತೆಲಂಗಾಣದ ನೂತನ ಸಿಎಂ ರೇವಂತ್ ರೆಡ್ಡಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ ಹಾರೈಸಿದ್ದಾರೆ.
ಮುಖ್ಯಮಂತ್ರಿ ಅವರು ಇಂದು ತೆಲಂಗಾಣದ ನೂತನ ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿ, ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ರೇವಂತ್ ರೆಡ್ಡಿ ಅವರಿಗೆ ಶುಭ ಕೋರಿದರು.
ತೆಲಂಗಾಣದ ನೂತನದ ಮುಖ್ಯಮಂತ್ರಿ ಆಗಿ ಇಂದು ಪ್ರಮಾಣ ವಚನ ಸ್ವೀಕರಿಸಿದ ರೇವಂತ್ ರೆಡ್ಡಿಗೆ ಪ್ರಧಾನಿ ಮೋದಿ ಕೂಡ ಶುಭ ಹಾರೈಸಿದ್ದಾರೆ. ತೆಲಂಗಾಣ ಮುಖ್ಯಮಂತ್ರಿಯಾಗಿ ‘ರೇವಂತ್ ರೆಡ್ಡಿ’, ಹಾಗೂ ಉಪಮುಖ್ಯಮಂತ್ರಿಯಾಗಿ ಮಲ್ಲುಭಟ್ಟಿ ವಿಕ್ರಮಾರ್ಕ ಇಂದು ಪ್ರಮಾಣ ವಚನ ಸ್ವೀಕರಿಸಿದರು.