
ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಆರೋಪವನ್ನು ವಾರದೊಳಗೆ ವಾಪಸ್ ಪಡೆಯಬೇಕು. ಇಲ್ಲವಾದಲ್ಲಿ ಬೆಂಗಳೂರಿನ ವಿಧಾನಸೌಧದ ಮುಂದಿರುವ ಗಾಂಧಿ ಪ್ರತಿಮೆ ಎದುರು ಧರಣಿ ಕುಳಿತು ಪ್ರಕರಣವನ್ನು ಸಿಪಿಐ ತನಿಖೆಗೆ ವಹಿಸುವಂತೆ ಒತ್ತಾಯಿಸುವುದಾಗಿ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಎಚ್ಚರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ನನ್ನ ಹೆಸರನ್ನು ಉಲ್ಲೇಖಿಸಿ ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಗರಣ ನಡೆದಿದೆ ಎಂದು ತಿಳಿಸಿದ್ದಾರೆ. ನಾನು ತಪ್ಪು ಮಾಡಿದ್ದರೆ ತನಿಖೆ ಮಾಡಿಸಿ ಜೈಲಿಗೆ ಕಳುಹಿಸಬಹುದಿತ್ತು. ನಾನು ಸಚಿವನಾಗಿದ್ದಾಗ ಅವರು ವಿರೋಧ ಪಕ್ಷದ ನಾಯಕರಾಗಿದ್ದರು. ಆಗ ಮಾತನಾಡಲಿಲ್ಲ. ಈಗ ಅವರ ಮೇಲೆ ಆರೋಪ ಕೇಳಿ ಬಂದಾಗ ಬೇರೆಯವರ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳು ತಮ್ಮ ವಿರುದ್ಧ ಮಾಡಿರುವ ಭ್ರಷ್ಟಾಚಾರದ ಆರೋಪವನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿರುವ ಕೋಟಾ ಶ್ರೀನಿವಾಸ ಪೂಜಾರಿ, ಇಲ್ಲದಿದ್ದಲ್ಲಿ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಲಾಗುವುದು. ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.