alex Certify BREAKING: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸಾವು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಸಮೀಪ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದಾರೆ.

ರಸ್ತೆ ಬದಿ ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ನಗರ ಹೊರ ವಲಯದಲ್ಲಿ ಘಟನೆ ನಡೆದಿದ್ದು, ಟಾಟಾ ಸುಮೋ ವಾಹನದಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ 5ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಗೇಪಲ್ಲಿ ಕಡೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಟಾಟಾ ಸುಮೋ ಬೆಂಗಳೂರು –ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ದಟ್ಟ ಮಂಜು ಕವಿದಿದ್ದರಿಂದ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ವಾಹನ ನಜ್ಜುಗುಜ್ಜಾಗಿದ್ದು, ಅದರಿಂದ ಮೃತದೇಹಗಳನ್ನು ಹೊರತೆಗೆಯಲು, ಗಾಯಾಳುಗಳನ್ನು ರಕ್ಷಿಸಲು ಹರಸಾಹಸ ನಡೆಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...