alex Certify BIG BREAKING: ಪ್ರವಾಸಿಗರೇ ಗಮನಿಸಿ, ಸುಪ್ರಸಿದ್ಧ ನಂದಿ ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ನಿಷೇಧ; ಚಿಕ್ಕಬಳ್ಳಾಪುರ ಡಿಸಿ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಪ್ರವಾಸಿಗರೇ ಗಮನಿಸಿ, ಸುಪ್ರಸಿದ್ಧ ನಂದಿ ಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ನಿಷೇಧ; ಚಿಕ್ಕಬಳ್ಳಾಪುರ ಡಿಸಿ ಆದೇಶ

ಚಿಕ್ಕಬಳ್ಳಾಪುರ: ಸುಪ್ರಸಿದ್ಧ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ನಿಷೇಧ ಹೇರಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಡಿಸೆಂಬರ್ 30 ರ ಸಂಜೆ 6 ರಿಂದ ಜನವರಿ 2 ರ ಬೆಳಗ್ಗೆ 6 ಗಂಟೆಯವರೆಗೆ ನಂದಿ ಗಿರಿಧಾಮದಲ್ಲಿ ಹೊಸ ವರ್ಷ ಆಚರಣೆಗೆ ನಿರ್ಬಂಧ ಹೇರಿದ್ದಾರೆ.

ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ನಿರ್ಬಂಧ ಹೇರಲಾಗಿದೆ. ಜನವರಿ 1 ರಂದು ಹೊಸ ವರ್ಷದ ದಿನಾಚರಣೆಯ ಅಂಗವಾಗಿ ಚಿಕ್ಕಬಳ್ಳಾಪುರ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ಸ್ಥಳವಾದ ನಂದಿ ಬೆಟ್ಟಕ್ಕೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆ ಹಾಗೂ ಇನ್ನಿತರೆ ಜಿಲ್ಲೆಗಳಿಂದ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ಸಾಧ್ಯತೆ ಇರುವುದರಿಂದ. ಕೋವಿಡ್-19 ರೂಪಾಂತರಿ ಓಮಿಕ್ರಾನ್ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆಗಳು ಇರುವುದರಿಂದ, ಪರಿಸರವನ್ನು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಡುವ ಹಿತದೃಷ್ಟಿಯಿಂದ ನಿರ್ಬಂಧ ವಿಧಿಸಲಾಗಿದೆ.

ಡಿ. 31 ಮತ್ತು ಜ. 1 ರಂದು ನಂದಿ ಗಿರಿಧಾಮಕ್ಕೆ ಪ್ರವಾಸಿಗರು ಗುಂಪು-ಗುಂಪಾಗಿ ತಿರುಗಾಡುವುದು, ಮದ್ಯಪಾನ ಮಾಡುವುದು, ಪ್ಲಾಸ್ಟಿಕ್ ಬಾಟಲ್ ಗಳನ್ನು ಎಸೆಯುವುದು ಹಾಗೂ ಇತ್ಯಾದಿ ಚಟುವಟಿಕೆಗಳು ನಡೆಯುವ ಸಂಭವ ಹೆಚ್ಚಾಗಿರುವುದರಿಂದ ಇದನ್ನು ತಡೆಗಟ್ಟುವ ಸಲುವಾಗಿ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ನಂದಿ ಗಿರಿಧಾಮಕ್ಕೆ ಡಿ. 30 ರ ಸಂಜೆ 6:00 ಗಂಟೆಯಿಂದ ಜ. 2 ರ ಬೆಳಗ್ಗೆ 6:00 ಗಂಟೆಯವರೆಗೆ ಸಾರ್ವಜನಿಕರು/ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.

ಅವರು ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿ, ರಾಜ್ಯದಲ್ಲಿ ಕೋವಿಡ್-19 ರೂಪಾಂತರಿ ಓಮಿಕ್ರಾನ್ ವೈರಾಣು ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ರಾಜ್ಯ ಸರ್ಕಾರವು ಎಲ್ಲಾ ಅಗತ್ಯ ಕ್ರಮಗಳು ಕೈಗೊಂಡಿದೆ. ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸುವ ಸಂಬಂಧದಲ್ಲಿ ಇನ್ನೂ ಹೆಚ್ಚಿನ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಮತ್ತು ಅವಶ್ಯಕತೆ ಕಂಡುಬಂದಿದ್ದು, ಇಂತಹ ಪರಿಸ್ಥಿತಿಯಲ್ಲಿ ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಹೊಸವರ್ಷವನ್ನು ಸರಳವಾಗಿ ಆಚರಿಸಬೇಕಾಗಿರುತ್ತದೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯದಾದ್ಯಂತ ಸಾಮೂಹಿಕ ಕೂಟ ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಹೆಚ್ಚು ಜನಸಂಖ್ಯೆಯುಳ್ಳ ವಸತಿ ಸಮುಚ್ಚಯಗಳಲ್ಲಿ ಮತ್ತು ಪಬ್/ಬಾರ್/ರೆಸ್ಟೋರೆಂಟ್ ಹಾಗೂ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವಂತಹ ಸ್ಥಳದಲ್ಲಿ ಆಯೋಜಿಸುವುದನ್ನು ಸರ್ಕಾರವು ನಿಷೇಧಿಸಿರುತ್ತದೆ.

ಈ ನಿಟ್ಟಿನಲ್ಲಿ ಪ್ರವಾಸಿ ತಾಣವಾದ ನಂದಿ ಬೆಟ್ಟದಲ್ಲಿ ಜನಸಂದಣಿಯನ್ನು ತಡೆಯುವುದು ಅತ್ಯವಶ್ಯಕವಾಗಿರುವುದರಿಂದ ಮತ್ತು ಕೋವಿಡ್-19 ರ ಕುರಿತಂತೆ ಇತ್ತೀಚೀನ ವಿದ್ಯಮಾನಗಳನ್ನು ಗಣನೆಗೆ ತೆಗೆದುಕೊಂಡು ನಂದಿ ಗಿರಿಧಾಮಕ್ಕೆ ಡಿ. 30 ರ ಸಂಜೆ 6 ಗಂಟೆಯಿಂದ ಜ. 2 ರ ಬೆಳಗ್ಗೆ 6 ಗಂಟೆಯವರೆಗೆ ಸಾರ್ವಜನಿಕರು/ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...