ಚಿಕ್ಕಬಳ್ಳಾಪುರ ಜಿಲ್ಲೆಯ ಹಲವೆಡೆ ಲಘು ಭೂಕಂಪ ಸಂಭವಿಸಿದೆ. ಬಿಸೇಗಾರಹಳ್ಳಿ, ಶೆಟ್ಟಿಗೆರೆಯಲ್ಲಿ ಭೂಮಿ ನಡುಗಿದೆ. ಏಕಕಾಲದಲ್ಲಿ ಎರಡೂ ಗ್ರಾಮದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ.
ಬೆಳಿಗ್ಗೆ 7 ಗಂಟೆಯ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಭಯಭೀತರಾದ ಜನ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಬಿಸೇಗಾರರಹಳ್ಳಿ ಮತ್ತು ಶೆಟ್ಟಿಗೆರೆ ಗ್ರಾಮದಲ್ಲಿ ಭೂಕಂಪ ಸಂಭವಿಸಿದ್ದು, ಗ್ರಾಮದ ಜನ ರಸ್ತೆಯಲ್ಲಿ ಗುಂಪುಗೂಡಿ ತಮಗೆ ಆದ ಕಂಪನದ ಅನುಭವ ಹೇಳಿಕೊಂಡಿದ್ದಾರೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮಾನಿಟರಿಂಗ್ ಕೇಂದ್ರ ಭೂಕಂಪ ಆಗಿರುವುದನ್ನು ದೃಢಪಡಿಸಿದೆ. ಎರಡು ಬಾರಿ ಭೂಮಿ ಕಂಪಿಸಿದೆ. ರಿಕ್ಟರ್ ಮಾಪಕದಲ್ಲಿ 2.9 ಮತ್ತು 3 ರಷ್ಟು ತೀವ್ರತೆ ದಾಖಲಾಗಿದೆ. ಬೆಳಗ್ಗೆ 7.10 ಹಾಗೂ 7.14 ರ ಸುಮಾರಿಗೆ ಮಂಡಿಕಲ್, ಭೋಗಪರ್ತಿ ಗ್ರಾಮಗಳ ವ್ಯಾಪ್ತಿಯಲ್ಲಿ ಭೂಕಂಪ ಉಂಟಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.