ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವು ಕಂಡಿದ್ದಾರೆ.
ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ನಾಗಾರ್ಜುನ ಇಂಜಿನಿಯರಿಂಗ್ ಕಾಲೇಜು ಹಾಸ್ಟೆಲ್ ನಲ್ಲಿ ಘಟನೆ ನಡೆದಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ಮೂಲದ ಪ್ರೀತಿ(22) ಸಂಶಯಾಸ್ಪದವಾಗಿ ಮೃತಪಟ್ಟಿದ್ದಾರೆ.
ಎರಡನೇ ವರ್ಷದ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ಪ್ರೀತಿ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ. ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.