ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಒಂದೇ ದಿನದಲ್ಲಿ 9 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 24 ಗಂಟೆಯಲ್ಲಿ 9 ಜನರಲ್ಲಿ ಕೋವಿಡ್ ಪಾಸಿಟಿವ್ ಬಂದಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇಂದು ಕೊರೊನಾ ಸೋಂಕಿಗೆ ಮೈಸೂರಿನಲ್ಲಿ 56 ವರ್ಷದ ವ್ಯಕ್ತಿ ಬಲಿಯಾಗಿದ್ದಾರೆ. ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ರೂಪಾಂತರ ವೈರಸ್ JN.1 ಪ್ರಕರಣಗಳು ಹೆಚ್ಚುತ್ತಿವೆ. 480ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳು ದಾಖಲಾಗಿವೆ.