ಚಿಕ್ಕಬಳ್ಳಾಪುರ: ಹಾಡಹಗಲೇ ಅಂಗಡಿಯಲ್ಲಿದ್ದ ಮಹಿಳೆ ಮೇಲೆ ಹಲ್ಲೆ ನಡೆಸಿ, ಮಾಂಗಲ್ಯ ಸರವನ್ನು ಕಿತ್ತುಕೊಂಡು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗಡಿಡಂ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಚಿಲ್ಲರೆ ಅಂಗಡಿಗೆ ಸಾಮಾನು ಖರೀದಿ ನೆಪದಲ್ಲಿ ಬಂದಿದ್ದ ಇಬ್ಬರು ಕಳ್ಳರು, ಅಂಗಡಿಯಲ್ಲಿದ್ದ ಮಹಿಳೆ ಮೇಲೆ ಹಲ್ಲೆ ನಡೆಸಿ, ಅವರ ಮಾಂಗಲ್ಯ ಸರ ಕಿತ್ತುಕೊಂಡು ಎಸ್ಕೇಪ್ ಆಗಿದ್ದಾರೆ.
ಬೈಕ್ ನಲ್ಲಿ ಬಂದಿದ್ದ ಇಬ್ಬರು ಖದೀಮರು ಈ ಕೃತ್ಯವೆಸಗಿದ್ದಾರೆ. ಅನಸೂಯಮ್ಮ ಎಂಬ ಮಹಿಳೆ ಹಲ್ಲೆಗೊಳಗಾಗಿದ್ದು, ಬಾಗೇಪಲ್ಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.