ಚಿಕ್ಕಬಳ್ಳಾಪುರ: ಬಾರ್ಲಹಳ್ಳಿಯಲ್ಲಿ ನಕಲಿ ಖಾತೆ ಸೃಷ್ಟಿಸಿ ನಿವೇಶನಗಳ ಮಾರಾಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ಪಂಚಾಯಿತಿ ಬಿಲ್ ಕಲೆಕ್ಟರ್ ಓರ್ವರನ್ನು ಅಮಾನತುಗೊಳಿಸಲಾಗಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಅವಲಗುರ್ಕಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾರ್ಲಹಳ್ಳಿಯಲ್ಲಿ ನಕಲಿ ಖಾತೆ ಸೃಷ್ಟಿಸಿ 55 ನಿವೇಶನಗಳನ್ನು ಮಾರಾಟ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ತಾಲೂಕು ಪಂಚಾಯಿತಿ ಸಿಇಒ ಜಿ.ಆರ್.ಮಂಜುನಾಥ್ 55 ನಿವೇಶನಗಳ ಖಾತೆ ರದ್ದು ಮಾಡಿ ಆದೆಶ ಹೊರಡಿಸಿದ್ದಾರೆ.
ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸೇರಿ ಜನವಸತಿ ಇಲ್ಲದ ಬಾರ್ಲಹಳ್ಳಿ ಗ್ರಾಮವನ್ನೇ ಮಾರಾಟ ಮಾಡಿದ್ದರು. ಇನ್ನು ನಿವೇಶನ ವಿಂಗಡಿಸಿ ಮಾರಾಟ ಮಾಡಿದ್ದ ಪ್ರಕರಣ ಸಂಬಂಧ ಅವಲಗುರ್ಕಿ ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ ಪ್ರಕಾಶ್ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಈ ಹಿಂದೆ ಇದೇ ಪ್ರಕರಣದಲ್ಲಿ ಗ್ರಾಮ ಪಂಚಾಯಿತಿ ಪಿಡಿಒ ಎಂ.ಸಿ.ವೆಂಕಟೇಶ್ ಅವರನ್ನು ಅಮಾನತು ಮಾಡಲಾಗಿತ್ತು.