ಚಿಕ್ಕಬಳ್ಳಾಪುರ: ಬೈಕ್ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಲಾರಿ ರಸ್ತೆ ಮಧ್ಯೆಯೇ ಧಗಧಗನೇ ಹೊತ್ತಿ ಉರಿದಿದ್ದು, ಓರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರದ ಹಾರೋಬಂಡೆ ಗ್ರಾಮದಲ್ಲಿ ನಡೆದಿದೆ.
ಚಲಿಸುತ್ತಿದ್ದ ಬೈಕ್ ಗೆ ಕ್ಯಾಂಟರ್ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಲಾರಿಗೆ ಬೆಂಕಿ ಹೊತ್ತಿಕೊಂಡಿದೆ. ಲಾರಿ ಅಡಿಗೆ ಸಿಲುಕಿದ ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.