
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ತೇಗೂರು ಗ್ರಾಮದ ಡಾ.ಅಬ್ದುಲ್ ಕಲಾಂ ವಸತಿ ಶಾಲೆಯಿಂದ ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಬಾಳೆಹೊನ್ನೂರು ಮೂಲದ ಯಶ್ವಿತ್ ಸಾಲಿಯಾನ್ ಹಾಗೂ ಬೆಂಗಳೂರು ಮೂಲದ ತರುಣ್ ವಸತಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದರು. ಮಾರ್ಚ್ 3ರಂದು ಇಬ್ಬರೂ ವಿದ್ಯಾರ್ಥಿಗಳು ವಸತಿ ಶಾಲೆಯಿಂದ ನಾಪತ್ತೆಯಾಗಿದ್ದಾರೆ.
ವಸತಿ ಶಾಲೆಯಲ್ಲಿ 9ನೇ ತರಗತಿ ಪರೀಕ್ಷೆ ಮುಗಿದ ಬಳಿಕ 10ನೇ ತರಗತಿ ಸಿದ್ಧತೆಗಾಗಿ ವಿಶೇಷ ತರಗತಿಗಳು ನಡೆಯುತ್ತಿದ್ದವು. ಪರೀಕ್ಷೆ ಮುಗಿದರೂ ರಜೆ ಸಿಕ್ಕಿರಲಿಲ್ಲ. ಇದರಿಂದ ವಿದ್ಯಾರ್ಥಿಗಳು ಬೇಸರಗೊಂಡಿದ್ದರು. ಇಬ್ಬರು ವಿದ್ಯಾರ್ಥಿಗಳು ವಿಶೇಷ ತರಗತಿ ಮುಗಿದ ಬಳಿಕ ರೂಮಿಗೆ ಬಂದವರೇ ಶಾಲೆಯ ಕಾಂಪೌಂಡ್ ಜಿಗಿದು 5 ಕಿ.ಮೀ ವರೆಗೆ ನಡೆದು ಸಗಿ ಚಿಕ್ಕಮಗಳೂರು ಬಸ್ ನಿಲ್ದಾಣ ತಲುಪಿದ್ದಾರೆ. ಅಲ್ಲಿಂದ ಬಸ್ ಹತ್ತಿ ಮಂಗಳೂರಿಗೆ ಬಂದಿದ್ದಾರೆ.
ಮಕ್ಕಳು ಕಾಣದಿದ್ದಾಗ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಗಿತ್ತು. ವಿದ್ಯಾರ್ಥಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು. ಮಂಗಳೂರಿಗೆ ಬಂದ ವಿದ್ಯಾರ್ಥಿಗಳು ಹೋಟೆಲ್ ವೊಂದರಲ್ಲಿ ಕೆಲಸಕ್ಕೆ ಸೇರಲು ಯತ್ನಿಸಿದ್ದರು. ಇದೀಗ ತಡರಾತ್ರಿ ಇಬ್ಬರು ವಿದ್ಯಾರ್ಥಿಗಳನ್ನು ಪೊಲೀಸರು ಮಂಗಳೂರಿನಲ್ಲಿ ಪತ್ತೆಮಾಡಿದ್ದಾರೆ.