ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಆಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ಗೊಲ್ಲರ ಬೀದಿಗೆ ಕೆಲಸಕ್ಕೆ ಹೋಗಿದ್ದ ದಲಿತ ಯುವಕನಿಗೆ ಥಳಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಗೇರಮರಡಿ ಗ್ರಾಮದ ಗೊಲ್ಲರ ಬೀದಿಯಲ್ಲಿ ನಿನ್ನೆ ಹಲ್ಲೆ ನಡೆಸಲಾಗಿದೆ. ಜೆಸಿಬಿ ಜೊತೆ ಕೆಲಸಕ್ಕೆ ತೆರಳಿದ್ದ ದಲಿತ ಯುವಕ ಮಾರುತಿ ಮೇಲೆ ಗೊಲ್ಲರ ಬೀದಿ ನಿವಾಸಿಗಳು ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಯುವಕನನ್ನು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಲ್ಲೆ ಖಂಡಿಸಿ ಇಂದು ಗೊಲ್ಲರ ಬೀದಿಯಲ್ಲಿ ಪ್ರತಿಭಟನೆ ನಡೆಸಲು ದಲಿತ ಸಂಘಟನೆಗಳು ಸಿದ್ಧತೆ ಮಾಡಿಕೊಂಡಿವೆ. ಅಸ್ಪೃಶ್ಯತೆ ವಿರುದ್ಧ ಪ್ರತಿಭಟನೆ ನಡೆಸಲು ದಲಿತ ಸಂಘಟನೆಗಳು ಮುಂದಾಗಿವೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.