alex Certify ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಸ್ಪೃಶ್ಯತೆ ಜೀವಂತ: ದಲಿತ ಯುವಕನ ಮೇಲೆ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಸ್ಪೃಶ್ಯತೆ ಜೀವಂತ: ದಲಿತ ಯುವಕನ ಮೇಲೆ ಹಲ್ಲೆ

ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಆಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ಗೊಲ್ಲರ ಬೀದಿಗೆ ಕೆಲಸಕ್ಕೆ ಹೋಗಿದ್ದ ದಲಿತ ಯುವಕನಿಗೆ ಥಳಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಗೇರಮರಡಿ ಗ್ರಾಮದ ಗೊಲ್ಲರ ಬೀದಿಯಲ್ಲಿ ನಿನ್ನೆ ಹಲ್ಲೆ ನಡೆಸಲಾಗಿದೆ. ಜೆಸಿಬಿ ಜೊತೆ ಕೆಲಸಕ್ಕೆ ತೆರಳಿದ್ದ ದಲಿತ ಯುವಕ ಮಾರುತಿ ಮೇಲೆ ಗೊಲ್ಲರ ಬೀದಿ ನಿವಾಸಿಗಳು ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಯುವಕನನ್ನು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಲ್ಲೆ ಖಂಡಿಸಿ ಇಂದು ಗೊಲ್ಲರ ಬೀದಿಯಲ್ಲಿ ಪ್ರತಿಭಟನೆ ನಡೆಸಲು ದಲಿತ ಸಂಘಟನೆಗಳು ಸಿದ್ಧತೆ ಮಾಡಿಕೊಂಡಿವೆ. ಅಸ್ಪೃಶ್ಯತೆ ವಿರುದ್ಧ ಪ್ರತಿಭಟನೆ ನಡೆಸಲು ದಲಿತ ಸಂಘಟನೆಗಳು ಮುಂದಾಗಿವೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...