ಚಿಕ್ಕಮಗಳೂರು: ಚಿಕ್ಕಮಗಳೂರಿನ 5 ಗ್ರಾಮಗಳು ಬೌಗೋಳಿಕವಾಗಿ ಅಪಾಯ ಸ್ಥಿತಿಯಲ್ಲಿದ್ದು, ಅಲ್ಲಿನ ಕುಟುಂಬಗಳನ್ನು ಸ್ಥಳಾಂತರಿಸುವಂತೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಸೂಚನೆ ನೀಡಿದೆ.
ಚಿಕ್ಕಮಗಳೂರಿನ ಐದು ಗ್ರಾಮಗಳಲ್ಲಿ ಭೂಕುಸಿತವಾಗುವ ಸಾಧ್ಯತೆ ಇದೆ ಎಂದು ಜಿಯೋಲಾಜಿಕಲ್ ವಿಜ್ಞಾನಿಗಳ ತಂಡ ಮುನ್ನೆಚ್ಚರಿಕೆ ನೀಡಿದೆ. ಮುಂದಿನ ಮಳೆಗಾಲದೊಳಗೆ ಈ ಗ್ರಾಮಗಳ ಜನರನ್ನು ಸ್ಥಳಾಂತರಿಸುವಂತೆ ಸೂಚನೆ ನೀಡಲಾಗಿದೆ.
ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಗುಡ್ಡೆತೋಟ, ಬಸರಿಕಟ್ಟೆ, ಶೃಂಗೇರಿ ತಾಲೂಕಿನ ಕೆರೆದಂಡೆ, ಕಳಾ ತಾಲೂಕಿನ ಸೋಮನಕಟ್ಟೆ, ಚನ್ನಹಡ್ಲು ಗ್ರಾಮಗಳಲ್ಲಿ ಭೂಕುಸಿತ ಸಂಭವವಿದ್ದು, ಅಪಾಯದ ಸ್ಥಿತಿಯಲ್ಲಿವೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಜನರನ್ನು ಸ್ಥಳಾಂತರ ಮಾಡುವಂತೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ವಿಜ್ಞಾನಿಗಳು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತಜ್ಞರ ಸೂಚನೆಯಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್, ಆಯಾ ತಾಲೂಕು ಅಧಿಕಾರಿಗಳಿಗೆ ಗ್ರಾಮಗಳ ಜನರನ್ನು ಸ್ಥಳಾಂತರ ಮಾಡುವಂತೆ ಸೂಚಿಸಿದ್ದಾರೆ. ಪರ್ಯಾಯ ವ್ಯವಸ್ಥೆ ಬಗ್ಗೆಯೂ ಚರ್ಚೆ ನಡೆಯುತ್ತಿದೆ.