alex Certify ಪರಿಸರವಾದಿ ಡಿ.ವಿ. ಗಿರೀಶ್ ಮೇಲೆ ಹಲ್ಲೆ ಮಾಡಿದ್ದ 7 ಮಂದಿ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪರಿಸರವಾದಿ ಡಿ.ವಿ. ಗಿರೀಶ್ ಮೇಲೆ ಹಲ್ಲೆ ಮಾಡಿದ್ದ 7 ಮಂದಿ ಅರೆಸ್ಟ್

ಚಿಕ್ಕಮಗಳೂರು: ಪರಿಸರವಾದಿ ಡಿ.ವಿ. ಗಿರೀಶ್ ಅವರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆ ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ.

ಪರಿಸರವಾದಿ ಗಿರೀಶ್ ಮತ್ತು ಅವರ ತಂಡದವರ ಮೇಲೆ ಚಿಕ್ಕಮಗಳೂರು ತಾಲೂಕಿನ ಕಂಬಿಹಳ್ಳಿಯಲ್ಲಿ ಆಗಸ್ಟ್ 30 ರಂದು ಹಲ್ಲೆ ನಡೆಸಲಾಗಿತ್ತು. ಗಿರೀಶ್ ಎಂಬುವರ ಜೊತೆಗಿದ್ದ ಬಾಲಕಿಯನ್ನು ಕಿಡಿಗೇಡಿಗಳು ಚುಡಾಯಿಸಿದ್ದರು. ಈ ವೇಳೆ ಕಿಡಿಗೇಡಿಗಳನ್ನು ಗಿರೀಶ್ ಅವರು ಪ್ರಶ್ನೆ ಮಾಡಿದ್ದರು. ಇದೇ ವಿಚಾರಕ್ಕೆ ಜಗಳವಾಡಿ ಗಿರೀಶ್ ಹಾಗೂ ಅವರ ಜೊತೆಗಿದ್ದವರ ಮೇಲೆ ಹಲ್ಲೆ ಮಾಡಲಾಗಿದ್ದು, ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಚಿಕ್ಕಮಗಳೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು 7 ಮಂದಿಯನ್ನು ಬಂಧಿಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...