ಚಿಕ್ಕಮಗಳೂರು ಜಿಲ್ಲೆ ಆವತಿಯಲ್ಲಿ ಮನೆ ಕೆಲಸಕ್ಕೆ ಬಂದಿದ್ದ ಯುವತಿಯೊಂದಿಗೆ ಬಲವಂತವಾಗಿ ಲೈಂಗಿಕ ಸಂಪರ್ಕ ಮಾಡಿ ಮಗು ಕೊಟ್ಟು ತೋಟ ಮಾಲಿಕ ಪರಾರಿಯಾಗಿದ್ದಾನೆ. ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆವತಿ ಹೊಸಹಳ್ಳಿಯ ರಾಜಕೀಯ ಪಕ್ಷವೊಂದರ ಮುಖಂಡ ಮಲ್ಲೇಶಗೌಡ ಆರೋಪಿಯಾಗಿದ್ದಾನೆ. ಜನವರಿ 16 ರಂದು ಸಂತ್ರಸ್ತ ಯುವತಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಮಲ್ಲಂದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಯುವತಿಯ ತಂದೆ, ತಾಯಿ ಮಲ್ಲೇಶಗೌಡನ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಹಣಕಾಸು ವಿಚಾರದಲ್ಲಿ ಜಗಳವಾಗಿ ಎರಡು ವರ್ಷಗಳ ಹಿಂದೆ ಬೇರೆ ತೋಟಕ್ಕೆ ಕೆಲಸಕ್ಕೆ ಸೇರಿಕೊಂಡಿದ್ದಾರೆ. 2020 ರ ಮೇ ತಿಂಗಳಲ್ಲಿ ಮನೆ ಕೆಲಸಕ್ಕೆ ಯುವತಿಯನ್ನು ಕರೆಸಿಕೊಂಡಿದ್ದ ಮಲ್ಲೇಶಗೌಡ ಆಕೆಯೊಂದಿಗೆ ಬಲವಂತವಾಗಿ ಲೈಂಗಿಕ ಸಂಪರ್ಕ ಮಾಡಿದ್ದು, ಯಾರಿಗಾದರೂ ಹೇಳಿದರೆ ಪೋಷಕರನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಹೊಟ್ಟೆ ನೋವು ಕಾಣಿಸಿಕೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಜನವರಿ 16 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾಳೆ. ದೂರು ದಾಖಲಾದ ನಂತರ ಆರೋಪಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.