
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮತ್ತೊಂದು ಶಾಲೆಯಲ್ಲಿ ಕೊರೋನಾ ಸ್ಪೋಟವಾಗಿದೆ. ಒಂದೇ ಶಾಲೆಯಲ್ಲಿ 10 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ.
ಶಿಕ್ಷಕ ಸೇರಿದಂತೆ 10 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದ್ದು, ಶಾಲೆಯನ್ನು ಒಂದು ವಾರ ಸೀಲ್ ಡೌನ್ ಮಾಡಲಾಗಿದೆ. ಕಳೆದ ವಾರ ವಸತಿ ಶಾಲೆಯೊಂದರಲ್ಲಿ ಹೆಚ್ಚಿನ ಮಕ್ಕಳಿಗೆ ಸೋಂಕು ತಗುಲಿದ್ದ ಘಟನೆ ನಂತರ ಎನ್.ಆರ್. ಪುರದ ಜೀವನ ಜ್ಯೋತಿ ಶಾಲೆಯಲ್ಲಿ ಶಿಕ್ಷಕ ಹಾಗೂ ಮಕ್ಕಳಿಗೆ ಕೊರೋನಾ ಸೋಂಕು ತಗುಲಿದ್ದರಿಂದ ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ ಎನ್ನಲಾಗಿದೆ.