
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿಯಲ್ಲಿ ವಿದ್ಯುತ್ ಪ್ರವಹಿಸಿ ಮೂವರು ಸಾವು ಕಂಡಿದ್ದಾರೆ. ಗಣಪತಿ ವಿಸರ್ಜಿಸಿ ಬರುವಾಗ ಟ್ರ್ಯಾಕ್ಟರ್ ನಲ್ಲಿದ್ದ ಪೆಂಡಾಲ್ ಗೆ ವಿದ್ಯುತ್ ತಂತಿ ತಗುಲಿ ಅವಘಡ ಸಂಭವಿಸಿದೆ.
ರಾಜು(47), ಪಾರ್ವತಿ(35), ರಚನಾ(28) ಸಾವು ಕಂಡವರು ಎಂದು ಹೇಳಲಾಗಿದೆ. ಗಾಯಗೊಂಡ 6 ಜನರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸಂಗೀತ ಪಲ್ಲವಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹಾಸನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಣಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.