ಚಿಕ್ಕಮಗಳೂರು: ಕರಾವಳಿ, ಮಲೆನಾಡು ಭಾಗದಲ್ಲಿಯೂ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಜಲಕ್ಷಾಮದಿಂದ ಕುಡಿಯುವ ನೀರಿಗೆ ಸಮಸ್ಯೆಯಾಗುವ ಸಾಧ್ಯತೆ ಹೆಚ್ಚಿರುವುದರಿಂದ ಚಿಕ್ಕಮಗಳೂರು ಜಿಲ್ಲಾಡಳಿತ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ಜಲ ಮೂಲಗಳಿಂದ ಕೃಷಿಗೆ ನೀರನ್ನು ಉಪಯೋಗಿಸದಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಕೆರೆ, ಹಳ್ಳ, ಬಾವಿಗಳಿಂದ ಕೃಷಿಗೆ ನೀರನ್ನು ಬಳಸದಂತೆ ಎಚ್ಚರಿಕೆ ನಿಡಿದೆ. ಪಂಪ್ ಸೆಟ್ ಗಳಿಂದಲೂ ಕೃಷಿ ಚಟುವಟಿಕೆಗಳಿಗೆ ನೀರು ಬಳಸುವಂತಿಲ್ಲ ಎಂದು ತಿಳಿಸಿದೆ.
ಕುಡಿಯುವ ನೀರಿಗೆ ತೊಂದರೆಯಾಗುವ ಸಾಧ್ಯಗಳಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ಸಹಾಯವಾಣಿ ತೆರೆಯಲಾಗಿದೆ. ನೀರಿನ ಸಮಸ್ಯೆ ಇದ್ದರೆ 08262-228181 ಸಂಖ್ಯೆಗೆ ಕರೆ ಮಾಡಬಹುದು.
ಬೆಳಿಗ್ಗೆ 9 ಗಂಟೆಯಿದ ಸಂಜೆ 7 ಗಂಟೆಯವರೆಗೆ ಈ ಸಹಾಯವಾಣಿ ಸೇವೆ ಲಭ್ಯವಿರಲಿದೆ ಎಂದು ಚಿಕ್ಕಮಗಳೂರು ಜಿಲ್ಲಾಡಳಿತ ತಿಳಿಸಿದೆ.
ಇನ್ನು ನೀರಿನ ಟ್ಯಾಂಕರ್ ಮಾಲೀಕರಿಗೆ ಮಾರ್ಚ್ 11ರೊಳಗಾಗಿ ನೋಂದಣಿ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ. ಚಿಕ್ಕಮಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕುಡಿಯುವ ನೀರಿಗೆ ಹಾಹಾಕಾರ ಶುರುವಾಗಿದೆ.