alex Certify BIG NEWS: ಬೀಡುಬಿಟ್ಟ ಕಾಡಾನೆಗಳ ಹಿಂಡು: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೀಡುಬಿಟ್ಟ ಕಾಡಾನೆಗಳ ಹಿಂಡು: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಹಲವು ಗ್ರಾಮಗಳು ಕಾಡಾನೆ ಉಪಟಳದಿಂದ ಕಂಗೆಟ್ಟಿದ್ದು, 13 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಇದೀಗ ಹಲವೆಡೆ ಶಾಲಾ-ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಚಿಕ್ಕಮಗಳೂರಿನ ವಿವಿಧೆಡೆ ಬೀಟಮ್ಮ ಗ್ಯಾಂಗ್ ಕಾಡಾನೆ ಹಿಂಡು ಬೀಡುಬಿಟ್ಟಿದ್ದು, ಮುಂಜಾಗೃತಾ ಕ್ರಮವಾಗಿ ಹಲವು ಗ್ರಾಮಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಚಿಕ್ಕಮಗಳೂರಿನ ವಸ್ತಾರೆ, ಮೂಗ್ತಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದೆ. ಈ ಎರಡೂ ಗ್ರಾಮ ಪಂಚಾಯ್ತಿ ವ್ಯಾಪ್ತಿಯ 13 ಗ್ರಾಮಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅಲ್ಲದೇ ಈ ಗ್ರಾಮಗಳಲ್ಲಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಶಾಲೆಗಳಿಗೆ ರಜೆ ನೀಡಿರುವುದರಿಂದ ಈ ಭಾಗದಲ್ಲಿ ವಿದ್ಯಾರ್ಥಿಗಳು ಹಾಗೂ ಶಾಲಾ-ಕಾಲೇಜು ಸಿಬ್ಬಂದಿಗಳ ಓಡಾಟಕ್ಕೂ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಎರಡೂ ಗ್ರಾಮಪಂಚಾಯ್ತಿ ವ್ಯಾಪ್ತಿಯ ವಸ್ತಾರೆ, ಆಲದಗುಡ್ಡೆ, ನಂದಿಕೆರೆ, ದಹುಲುವಾಲೆ, ತೊಂಡವಳಿ, ಸಂಸೆ, ದಿಣ್ಣಿಕೆರೆ, ದಂಬದಹಳ್ಳಿ, ಶಿರಗುಂದ, ದುಂಗರೆ, ಮೂಗ್ರಿಹಳ್ಳಿ, ಕದ್ರಿಮಿದ್ರಿ ಸೇರಿದಂತೆ 13 ಗ್ರಾಮಗಳಲ್ಲಿ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಹಾಗೂ ಆನೆಗಳನ್ನು ಕಾಡಿಗೆ ಕಳುಹಿಸುವ ನಿಟ್ಟಿನಲ್ಲಿ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಸಾರ್ವಜನಿಕರಿಂದ ತೊಂದರೆಯಾಗಬಾರದೆಂದು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಲಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...