
ಚಿಕ್ಕಮಗಳೂರು: ಚಿಕ್ಕಮಗಳೂರಿನ ಅರಣ್ಯ ಪ್ರದೇಶದಲ್ಲಿ ಮತ್ತೆ ಕಾಡ್ಗಿಚ್ಚು ಸಂಭವಿಸಿದೆ. ಚಂದ್ರದ್ರೋಣ ಪರ್ವತ ಸಾಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸಪಟ್ಟಿದ್ದಾರೆ.
ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ತಪ್ಪಲಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ನೂರಾರು ಎಕರೆ ಅರಣ್ಯ ಸಂಪತ್ತು ಬೆಂಕಿಗಾಹುತಿಯಾಗಿವೆ. ಒಂದೆಡೆ ರಣಬಿಸಿಲು, ಮತ್ತೊಂದೆಡೆ ಬೆಂಕಿಯ ಕೆನ್ನಾಲಿಗೆ ಅರಣ್ಯ ಪ್ರದೇಶವನ್ನು ಆಪೋಷನ ತೆಗೆದುಕೊಳ್ಳುತ್ತಿದೆ.
ಘಟನಾ ಸ್ಥಳಕ್ಕೆ ಧಾವಿಸಿರುವ ಅರಣ್ಯ ಸಿಬ್ಬಂದಿಗಳು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ಒಂದೆಡೆ ಬೆಂಕಿ ನಿಯಂತ್ರಿಸುತ್ತಿದ್ದಂತೆ ಗಾಳಿಯಿಂದಾಗಿ ಇನ್ನೊಂಡೆ ಬೆಂಕಿ ಧಗಧಗನೆ ಹೊತ್ತಿ ಉರಿಯುತ್ತಿದೆ.